ಕರ್ನಾಟಕ

karnataka

ETV Bharat / bharat

ಅಭ್ಯರ್ಥಿಗಳ ಕ್ರಿಮಿನಲ್​ ಪ್ರಕರಣಗಳ ವಿಚಾರ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್​

ಮನವಿ ತಿರಸ್ಕಾರ ಅರ್ಜಿ ಸಂಬಂಧ ಸುಪ್ರೀಂಕೋರ್ಟ್​ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್​ ಜಾರಿ ಮಾಡಿದೆ

By

Published : Mar 29, 2019, 12:54 PM IST

ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್​ ಜಾರಿ ಮಾಡಿದ ಸುಪ್ರೀಂಕೋರ್ಟ್

ನವದೆಹಲಿ: ಮನವಿ ತಿರಸ್ಕಾರ (contempt petition ) ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್​ ಜಾರಿ ಮಾಡಿದೆ.

ಚುನಾವಣೆ ಎದುರಿಸುವ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ವಿರುದ್ಧದ ಕ್ರಿಮಿನಲ್​ ಪ್ರಕರಣಗಳನ್ನ ಕಡ್ಡಾಯವಾಗಿ ನಮೂದು ಮಾಡಬೇಕು ಹಾಗೂ ಅದನ್ನು ಪತ್ರಿಕೆಗಳಲ್ಲಿ ಕಡ್ಡಾಯವಾಗಿ ಪ್ರಕಟಣೆ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ಆದರೆ, ಚುನಾವಣಾ ಆಯೋಗ ಸುಪ್ರೀಂಕೋರ್ಟ್​ ಆದೇಶವನ್ನ ಜಾರಿ ಮಾಡಿಲ್ಲ ಎಂದು ಆರೋಪಿಸಿ ಮನವಿ ತಿರಸ್ಕಾರ ಅರ್ಜಿ ಸಲ್ಲಿಕೆ ಮಾಡಿತ್ತು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್​ ಪೀಠ ಈ ಸಂಬಂಧ ಚುನಾವಣಾ ಆಯೋಗಕ್ಕೆ ನೋಟಿಸ್​ ಜಾರಿ ಮಾಡಿದ್ದು, ಒಂದು ವಾರದೊಳಗೆ ಉತ್ತರ ನೀಡುವಂತೆ ಸೂಚಿಸಿದೆ.

ABOUT THE AUTHOR

...view details