ಕರ್ನಾಟಕ

karnataka

ETV Bharat / bharat

ಎನ್​​ಪಿಆರ್​​ & ಎನ್​​ಆರ್​ಸಿ ಒಂದೇ ನಾಣ್ಯದ ಎರಡು ಮುಖ: ಮೋದಿ ಸರ್ಕಾರದ ವಿರುದ್ಧ ಓವೈಸಿ ವಾಗ್ದಾಳಿ! - ಮೋದಿ ಸರ್ಕಾರದ ವಿರುದ್ಧ ಓವೈಸಿ ವಾಗ್ದಾಳಿ

ಕೇಂದ್ರ ಸರ್ಕಾರದ ಎನ್​ಆರ್​ಸಿ ಹಾಗೂ ಎನ್​ಪಿಆರ್​ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಇದರ ಮಧ್ಯೆ ಅಸಾದುದ್ದೀನ್​ ಓವೈಸಿ ಮಾತನಾಡಿ ಎನ್​​​ಪಿಆರ್​ ವಿರುದ್ಧ ಕಿಡಿ ಕಾರಿದ್ದಾರೆ.

AIMIM Asaduddin Owaisi
ಅಸಾದುದ್ದೀನ್​ ಓವೈಸಿ

By

Published : Dec 25, 2019, 5:32 PM IST

ಹೈದರಾಬಾದ್​​: ದೇಶಾದ್ಯಂತ ಈಗಾಗಲೇ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್​ಆರ್​ಸಿ) ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ನಡೆಯುತ್ತಿದ್ದು, ಇದರ ಮಧ್ಯೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್​ಪಿಆರ್) ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ದೇಶಾದ್ಯಂತ ವಿಪಕ್ಷಗಳು ಈ ಕಾಯ್ದೆಗಳ ವಿರುದ್ಧ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ನಿನ್ನೆ ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದ ಗೃಹ ಸಚಿವ ಅಮಿತ್​ ಶಾ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಇದೇ ವಿಷಯವಾಗಿ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್​ ಸಂಸದ ಅಸಾದುದ್ದೀನ್​ ಓವೈಸಿ ಮಾತನಾಡಿದ್ದು, ಎನ್​ಪಿಆರ್​ ಹಾಗೂ ಎನ್​ಆರ್​ಸಿ ಒಂದೇ ನಾಣ್ಯದ ಎರಡು ಮುಖ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ದೇಶದ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಎಲ್ಲ ಪಕ್ಷಗಳು ಇದರ ವಿರುದ್ಧ ಹೋರಾಟ ನಡೆಸುವ ಅವಶ್ಯಕತೆ ಇದೆ ಎಂದಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ಓವೈಸಿ ವಾಗ್ದಾಳಿ

ಸುದ್ದಿಗಾರರೊಂದಿಗೆ ಮಾತನಾಡಿರುವ ಓವೈಸಿ, ರಾಷ್ಟ್ರೀಯ ಪೌರತ್ವ ನೋಂದಣಿ(ಎನ್​ಆರ್​ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್​ಪಿಆರ್) ಯಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ರಾಷ್ಟ್ರೀಯ ಪೌರತ್ವ ನೋಂದಣಿ(ಎನ್​ಆರ್​ಸಿ) ಮುಂದುವರಿದ ಭಾಗವೇ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಎಂದು ತಿಳಿಸಿದ್ದಾರೆ.

ABOUT THE AUTHOR

...view details