ಕರ್ನಾಟಕ

karnataka

ETV Bharat / bharat

ಟ್ರಕ್ ಪಲ್ಟಿಯಾಗಿ ಮೂವರು ಸಾವು, 7 ಮಂದಿಗೆ ಗಾಯ - ಮಧ್ಯಪ್ರದೇಶ ಟ್ರಕ್ ಪಲ್ಟಿ

ಗೋಧಿ ಚೀಲಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ಘಟನೆ ನಡೆದಿದ್ದು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

truck
truck

By

Published : Jun 10, 2020, 5:10 PM IST

ಛತ್ತರ್‌ಪುರ (ಮಧ್ಯಪ್ರದೇಶ): ವೇಗವಾಗಿ ಚಲಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಗೋಧಿ ಚೀಲಗಳನ್ನು ಸಾಗಿಸುತ್ತಿದ್ದ ಟ್ರಕ್ ಉತ್ತರ ಪ್ರದೇಶದ ಘಟಂಪುರ್ ಮೂಲಕ ಆಂಧ್ರಪ್ರದೇಶದತ್ತ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಎನ್‌ಎಚ್-34 ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಶಹಗರ್ ಪೊಲೀಸ್ ಠಾಣೆಯ ರವೀಂದ್ರ ಬಾಗ್ರಿ ಮತ್ತು ಹಿರಾಪುರ ಪೊಲೀಸ್ ಠಾಣೆಯ ಕವಿತಾ ದುಬೆ ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಬಳಿಕ ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಇಬ್ಬರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details