ಮುಂಬೈ (ಮಹಾರಾಷ್ಟ್ರ):ಇಲ್ಲಿನ ವರ್ಲಿ ಪ್ರದೇಶದಲ್ಲಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ.
ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು - ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು
ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಮುಂಬೈನ ವರ್ಲಿಯಲ್ಲಿ ಸಂಭವಿಸಿದೆ.
ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿ
ಕಾರು ಚಲಾಯಿಸುತ್ತಿದ್ದರೆನ್ನಲಾದ ಮಹಿಳೆಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ತಪಾಸಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆಯೂ ಮುಂದುವರೆದಿದೆ.