ಹೈದರಾಬಾದ್ :ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗಜ್ವೆಲ್ ವಲಯದ ಪ್ರಜ್ಞಾಪುರ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು
ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರು
ಮೃತರನ್ನು ಮಂಚೇರಿಯಲ್ ಮೂಲದ ಅಂಜಿಬಾಬು, ಸಾಯಿ ಪ್ರಸಾದ್ ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕ ಭಾನು ಪ್ರಸಾದ್ ಎಂಬುವರನ್ನು ಹೈದರಾಬಾದ್ನ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಸವಾರರು ಕೆಲಸದ ನಿಮಿತ್ತ ಹೈದರಾಬಾದ್ಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.