ಮಹಾರಾಜ್ಗಂಜ್ (ಉತ್ತರ ಪ್ರದೇಶ):ಭಾರತ ನೇಪಾಳ ಗಡಿ ಬಳಿ 478 ಗ್ರಾಂ ಹೆರಾಯಿನ್ನೊಂದಿಗೆ ಮೂವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿಯ ಆಧಾರದ ಮೇಲೆ, ಎಸ್ಎಸ್ಬಿ ಮತ್ತು ಸೋನೌಲಿ ಪೊಲೀಸರ ಸಹಕಾರದೊಂದಿಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 478 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 4 ಕೋಟಿ ರೂಪಾಯಿ. ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆರಾಯಿನ್ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.