ಡೆಹ್ರಾಡೂನ್ (ಉತ್ತರಾಖಂಡ್): ಚಮೋಲಿ ಜಿಲ್ಲೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ನದಿಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ ಮೂವರು ಮೃತಪಟ್ಟು, ಓರ್ವ ಗಾಯಗೊಂಡಿದ್ದಾನೆ.
ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಕಾರು: ಮೂವರು ನೀರುಪಾಲು - ಕಾರು ದುರಂತಗಳು
ಉತ್ತರಾಖಂಡ್ನಲ್ಲಿ ಸಂಭವಿಸಿದ ಕಾರು ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಚಲಿಸುತ್ತಿದ್ದ ಕಾರು ನದಿಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಪ್ರಯಾಣಿಕರಲ್ಲಿ ಮೂವರು ನೀರುಪಾಲಾಗಿದ್ದಾರೆ.
ಸಂಗ್ರಹ ಚಿತ್ರ
ಚಮೋಲಿ ಜಿಲ್ಲೆಯ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿ 7ರ ಪಕ್ಕದಲ್ಲಿ ಹರಿಯುತ್ತಿರುವ ಅಲಕಾನಂದ ನದಿಗೆ ಕಾರು ಬಿದ್ದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನ್ನಪ್ಪಿದರೆ, ಓರ್ವ ಗಾಯಗೊಂಡಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಾರು ಗುಜರಾತ್ನಿಂದ ಬದ್ರಿನಾಥ್ಗೆ ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಅಲಕಾನಂದ ನದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ನಾಲ್ವರು ಪ್ರಯಾಣಿಕರಿದ್ದರು ಎನ್ನಲಾಗಿದೆ.