ನವದೆಹಲಿ: ಪಶ್ಚಿಮ ದೆಹಲಿಯ ಕೀರ್ತಿ ನಗರ ಪ್ರದೇಶದ ಗುಜರಿ ಅಂಗಡಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ 10:50 ರ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಏಳು ವಾಹನಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಅಂಗಡಿಯೊಳಗಿದ್ದ ಮೂವರೂ ಸಂಪೂರ್ಣ ಸುಟ್ಟುಹೋಗಿದ್ದರು.