ಕೋಲ್ಕತಾ (ಪಶ್ಚಿಮ ಬಂಗಾಳ):ಕೋವಿಡ್ -19 ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದ ಕೋಲ್ಕತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂವರು ವೈದ್ಯರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೋವಿಡ್ -19 ರೋಗಿಯೊಂದಿಗೆ ಸಂಪರ್ಕದಲ್ಲಿದ್ದ 3 ವೈದ್ಯರಲ್ಲಿ ಸೋಂಕು ಪತ್ತೆ
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಕೋವಿಡ್ -19 ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ ಕೋಲ್ಕತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂವರು ವೈದ್ಯರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಷ್ಟೇಅಲ್ಲ ಕೋವಿಡ್ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇತರ ಇಬ್ಬರು ರೋಗಳಿಗೂ ಸೋಂಕು ತಗುಲಿದೆ. ಏತನ್ಮಧ್ಯೆ, ಪಶ್ಚಿಮ ಬಂಗಾಳದ ಅತಿದೊಡ್ಡ ಸರ್ಕಾರಿ ರೆಫರಲ್ ಆಸ್ಪತ್ರೆ ಎಸ್‌ಎಸ್‌ಕೆಎಂ ನಲ್ಲಿ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ 8 ವೈದ್ಯರು ಸೇರಿದಂತೆ 14 ಜನರನ್ನು ಕ್ವಾರಂಟೈನ್ಗೆ ಕಳುಹಿಸಲಾಗಿದೆ.
ಏಪ್ರಿಲ್ 13 ರಂದು ಕೋವಿಡ್ 19 ಇದ್ದ ರೋಗಿಯು ನಿಧನರಾಗಿದ್ದು, ಅವರ ಡಯಾಲಿಸಿಸ್ ನಡೆದ ಕೆಎಂಸಿಎಚ್ ಸ್ತ್ರೀ ಔಷಧಿ ವಾರ್ಡ್ ಜೊತೆಗೆ ಪುರುಷ ವಾರ್ಡ್ಗಳಲ್ಲೂ ಪ್ರವೇಶವನ್ನು ನಿಲ್ಲಿಸಲಾಗಿದೆ. ನಂತರ ಹಲವಾರು ವೈದ್ಯರು, ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದವರ, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರನ್ನು ಕ್ವಾರಂಟೈನ್ಗೆ ಕಳುಹಿಸಲಾಯಿತು.