ರೈಸನ್(ಮಧ್ಯಪ್ರದೇಶ):ಮದ್ಯದ ಬಾಟಲ್ಗಳನ್ನು ಹಿಡಿದು ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮೂವರು ಕಂದಾಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮದ್ಯದ ಬಾಟಲ್ ಹಿಡಿದು ಪೋಸ್... ಮೂವರು ಕಂದಾಯ ಇಲಾಖೆ ಅಧಿಕಾರಿಗಳು ಅಮಾನತು - ಮೂವರು ಕಂದಾಯ ಇಲಾಖೆ ಅಧಿಕಾರಿಗಳು ಅಮಾನತು
ಮದ್ಯದ ಬಾಟಲ್ಗಳನ್ನು ಹಿಡಿದು ಪೋಸ್ ಕೊಟ್ಟಿದ್ದ ಮೂವರು ಕಂದಾಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮೂವರು ಕಂದಾಯ ಇಲಾಖೆ ಅಧಿಕಾರಿಗಳು ಅಮಾನತು
ಅಜಯ್ ಧಾಕಡ್, ಧರ್ಮೇಂದ್ರ ಮೆಹ್ರಾ ಮತ್ತು ದಯರಾಮ್ ಅರ್ಮಾ ಅಮಾನತುಗೊಂಡ ಕಂದಾಯ ಇಲಾಖೆ ಅಧಿಕಾರಿಗಳು. ಈ ಮೂವರು ಅಧಿಕಾರಿಗಳು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಸೆಲ್ಫಿ ತೆಗೆದುಕೊಂಡಿದ್ದಾರೆ.
ಈ ಫೋಟೊ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ರೈಸನ್ ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಬ್ರಜೆಂದ್ರ ಸಿಂಗ್ ರಾವತ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.