ಶ್ರೀನಗರ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್- ಇ -ತೊಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಆದರೆ ಘಟನೆಯಲ್ಲಿ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ.
ಶ್ರೀನಗರ ಎನ್ಕೌಂಟರ್: ಮೂವರು ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ - Director General of Police Dilbagh Singh
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್- ಇ -ತೊಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಘಟನೆಯಲ್ಲಿ ಎಎಸ್ಐ ಬಾಬು ರಾಮ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿಕೊಂಡಿರುವ ಸಂಶಯದ ಮೇರೆಗೆ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಉಗ್ರರು ಗುಂಡು ಹಾರಿಸಿದ್ದಾರೆ. ಈ ಸಂದರ್ಭ ಎನ್ಕೌಂಟರ್ ನಡೆಸಿದ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆಗೈದಿದೆ. ಘಟನೆಯಲ್ಲಿ ಎಎಸ್ಐ ಬಾಬು ರಾಮ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.
ಲಷ್ಕರ್- ಇ -ತೊಯ್ಬಾದ ಮೃತ ಮೂವರು ಉಗ್ರರ ಪೈಕಿ ಓರ್ವನು ಸಂಘಟನೆಯ ಕಮಾಂಡರ್ ಆಗಿದ್ದು, ಕಳೆದೊಂದು ವರ್ಷದಿಂದ ಶ್ರೀನಗರದಲ್ಲಿ ಅಹಿತಕರ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದನು ಎಂದು ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.