ರಾಂಚಿ: ಜಾರ್ಖಂಡನ ಜಮ್ತಾರ್ ಜಿಲ್ಲೆಯ ನಾರಾಯಣಪುರ ಬ್ಲಾಕ್ನಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಏಕಾಏಕಿ ಗಣಿ ಕುಸಿದು ಮೂವರು ಮಹಿಳೆಯರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
ಅಕ್ರಮ ಗಣಿಗಾರಿಕೆ ವೇಳೆ ಗಣಿ ಕುಸಿದು ಮೂವರು ಮಹಿಳೆಯರ ದುರ್ಮರಣ
ಗಣಿಗಾರಿಕೆ ವೇಳೆ ಗಣಿ ಕುಸಿದು ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಗಣಿಗಾರಿಕೆ ನಡೆಸುತ್ತಿದ್ದ ವೇಳೆ, ಮಹಿಳೆಯರು ಬಿಳಿ ಮಣ್ಣು ಹೊರತೆಗೆಯುವ ಕೆಲಸದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಜೆಸಿಬಿ ಯಂತ್ರಗಳ ಸಹಾಯದಿಂದ ಈಗಾಗಲೇ ಮೃತದೇಹ ಹೊರತೆಗೆಯಲಾಗಿದ್ದು, ಸ್ಥಳೀಯರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದರಲ್ಲಿ ಮತ್ತಷ್ಟು ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಇರ್ಫಾನ್ ಅನ್ಸಾರಿ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಮೃತ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಅಕ್ರಮ ಗಣಿಗಾರಿಕೆ ಕುರಿತು ಈಗಾಗಲೇ ಈಟಿವಿ ಭಾರತ ವರದಿ ಪ್ರಸಾರ ಮಾಡಿದ್ದರೂ, ಜಿಲ್ಲಾಡಳಿತ ಯಾವುದೇ ರೀತಿಯ ಕ್ರಮ ಕೈಗೊಂಡಿರಲಿಲ್ಲ.