ಕರ್ನಾಟಕ

karnataka

ETV Bharat / bharat

ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನಾಲ್ಕು ತಿಂಗಳ ಹೆಣ್ಣು ಹುಲಿ ಶವ ಪತ್ತೆ

ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನಾಲ್ಕು ತಿಂಗಳ ಹೆಣ್ಣು ಹುಲಿ ಮರಿಯ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಹಿರಿಯ ಅಧಿಕಾರಿಗಳು, ಪಶುವೈದ್ಯಕೀಯ ಎನ್‌ಜಿಒಗಳು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By

Published : Feb 3, 2021, 7:01 AM IST

Tiger cub found dead in Kaziranga Range
ನಾಲ್ಕು ತಿಂಗಳ ಹೆಣ್ಣು ಹುಲಿ ಶವ ಪತ್ತೆ

ತೇಜ್‌ಪುರ (ಅಸ್ಸೋಂ) :ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನಾಲ್ಕು ತಿಂಗಳ ಹೆಣ್ಣು ಹುಲಿ ಮರಿಯ ಶವ ಪತ್ತೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನ ನಿರ್ದೇಶಕ ಪಿ. ಶಿವಕುಮಾರ್, ನಾಲ್ಕು ತಿಂಗಳ ಹೆಣ್ಣು ಹುಲಿ ಮರಿ ಸಾವಿಗೆ ಪ್ರಾಣಿಗಳ ನಡುವಿನ ಸಂಘರ್ಷ ಕಾರಣವಿರಬಹುದು ಎಂದು ಹೇಳಿದ್ದಾರೆ. ಹುಲಿಯ ಕುತ್ತಿಗೆ ಇನ್ನಿತರ ಭಾಗಗಳಲ್ಲಿ ಗಾಯಗಳಾಗಿದ್ದು, ಪಕ್ಕೆಲುಬುಗಳು ಮುರಿದಿವೆ. ಹೆಚ್ಚಿನ ತನಿಖೆಗಾಗಿ ಮರಣೋತ್ತರ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದರು.

ಸ್ಥಳಕ್ಕೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಹಿರಿಯ ಅಧಿಕಾರಿಗಳು, ಪಶುವೈದ್ಯಕೀಯ ಎನ್‌ಜಿಒಗಳು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಓದಿ : ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸುಪ್ರೀಂಕೋರ್ಟ್ ಆದೇಶಕ್ಕೆ ಒಂದು ವರ್ಷ..

ABOUT THE AUTHOR

...view details