ಮೆಹ್ಸಾನಾ(ಗುಜರಾತ್): ಮಹಿಳಾ ಪೊಲೀಸ್ ಅಧಿಕಾರಿಯೋರ್ವರು ಪೊಲೀಸ್ ಠಾಣೆಯೊಳಗೆ ಡ್ಯಾನ್ಸ್ ಮಾಡಿರುವ ಟಿಕ್ ಟಾಕ್ ವಿಡಿಯೋ ವೈರಲ್ ಆಗಿದ್ದು, ಇದನ್ನು ಗಮನಿಸಿರುವ ಅಧಿಕಾರಿಗಳು ಆಕೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆಯೊಳಗೆ ಡ್ಯಾನ್ಸ್ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿ; ಅಮಾನತು ಶಿಕ್ಷೆ - ಮಹಿಳಾ ಪೊಲೀಸ್ ಅಧಿಕಾರಿ
ಮಹಿಳಾ ಪೊಲೀಸ್ ಅಧಿಕಾರಿಯೋರ್ವರು ಪೊಲೀಸ್ ಠಾಣೆಯಲ್ಲೇ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಇದೀಗ ಅವರನ್ನು ಅಮಾನತು ಮಾಡಲಾಗಿದೆ.
ಗುಜರಾತ್ನ ಮೆಹ್ಸಾನಾ ಜಿಲ್ಲೆಯ ಲಂಗ್ನಾಜ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮಹಿಳಾ ಪೊಲೀಸ್ ಅಧೀಕ್ಷಕರಾಗಿದ್ದು,2016ರಲ್ಲಿ ಪೊಲೀಸ್ ಇಲಾಖೆಗೆ ನೇಮಕಗೊಂಡಿದ್ದರು. ಠಾಣೆಯ ಲಾಕಪ್ ಪಕ್ಕದಲ್ಲಿ ಡ್ಯಾನ್ಸ್ ಮಾಡಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಘಟನೆಯಿಂದ ಗುಜರಾತ್ ಪೊಲೀಸ್ ಇಲಾಖೆ ಮುಜುಗರಕ್ಕೊಳಗಾಗಿದ್ದು, ತಕ್ಷಣ ಆಕೆಯ ವಿರುದ್ಧ ಕ್ರಮ ಕೈಗೊಂಡಿದೆ.
ಜುಲೈ 20ರಂದು ಈ ಘಟನೆ ನಡೆದಿದ್ದು, ಡ್ಯಾನ್ಸ್ ಮಾಡಿರುವುದು ಲೇಡಿ ಕಾನ್ಸ್ಟೇಬಲ್ ಅರ್ಪಿತಾ ಚೌದರಿ ಎಂದು ಗುರುತಿಸಲಾಗಿದೆ. ಪೊಲೀಸ್ ಠಾಣೆಯ ನಿಯಮ ಮುರಿದ ಕಾರಣ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.