ಕರ್ನಾಟಕ

karnataka

ದೀದಿ ತವರಲ್ಲಿ ರಕ್ತಚರಿತೆ: ಬಿಜೆಪಿ-ಟಿಎಂಸಿ ಸಂಘರ್ಷಕ್ಕೆ 8 ಬಲಿ,18 ಜನ ಕಣ್ಮರೆ

ಶನಿವಾರ ರಾತ್ರಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದ್ದು, ಉಭಯ ಪಕ್ಷಗಳ 8 ಜನ ಕಾರ್ಯಕರ್ತ ಮೃತಪಟ್ಟಿದ್ದಾರೆ. ಅನೇಕ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

By

Published : Jun 9, 2019, 5:41 PM IST

Published : Jun 9, 2019, 5:41 PM IST

ಸಂಘರ್ಷ ನಿಯಂತ್ರಿಸಲು ನಿಯೋಜನೆಗೊಂಡ ಪೊಲೀಸ್ ಪಡೆ

ಕೋಲ್ಕತ್ತಾ:ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಪಕ್ಷಗಳ ನಡುವೆ ನಡೆದ ಘರ್ಷಣೆಯಲ್ಲಿ ಇದುವರೆಗೂ ಒಟ್ಟು 8 ಜನ ಕಾರ್ಯಕರ್ತರು ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದ್ದು, ಬಿಜೆಪಿ ಹಾಗೂ ಟಿಎಂಸಿಯ 8 ಜನ ಕಾರ್ಯಕರ್ತರು ಮೃತಪಟ್ಟಿದ್ದಾರೆ. ಅನೇಕ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳದ ಉತ್ತರಭಾಗದಲ್ಲಿರುವ 24 ಪರಗಣ ಜಿಲ್ಲೆಯ ನಜತ್​ನಲ್ಲಿ ಬಿಜೆಪಿ ಬಾವುಟಗಳನ್ನು ತೆಗೆದುಹಾಕುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆರಂಭವಾಗಿದೆ. ಈ ವೇಳೆ ಮೂವರು ಬಿಜೆಪಿ ಕಾರ್ಯಕರ್ತರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಅವರ ಶವಗಳು ಇನ್ನೂ ಸಿಕ್ಕಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡರ ಹೇಳಿಕ ಪ್ರಕಾರ, ಈ ಸಂಘರ್ಷದಲ್ಲಿ ಪಕ್ಷದ 18 ಕಾರ್ಯಕರ್ತರು ಕಾಣೆಯಾಗಿದ್ದಾರೆ. ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳುತ್ತಿಲ್ಲ ಎಂದು ಆಪಾದಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಹತ್ಯೆ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸಿಎಂ ಮಮತಾ ಬ್ಯಾನರ್ಜಿಗೆ ಸೂಚಿಸಿದೆ.

For All Latest Updates

TAGGED:

ABOUT THE AUTHOR

...view details