ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕೋಲ್ಕತ್ತಾದ ನಾಡಿಯಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಚಂತಲಾ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸದ್ದನ್ನು ಖಂಡಿಸಿ ಪ್ರತಿಭಟಿಸುತ್ತಿದ್ದ ಜನರ ಮನವೊಲಿಸಲು ಪ್ರಯತ್ನಿಸುತ್ತಿದ್ದಾಗ ಪ್ರತಿಭಟನಾಕಾರರು ಇಟ್ಟಿಗೆ ಎಸೆದಿದ್ದಾರೆ. ಅಲ್ಲಿಗೆ ಮನವೊಲಿಸಲು ಬಂದಿದ್ದ ತೃಣಮೂಲ ಕಾಂಗ್ರೆಸ್ನ ಶಾಸಕ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ.
ಅಂಫಾನ್ ಚಂಡಮಾರುತ ಅಪ್ಪಳಿಸಿದ ಆರು ದಿನಗಳ ನಂತರವೂ ಈ ಪ್ರದೇಶಕ್ಕೆ ಕಡಿತಗೊಂಡಿದ್ದ ವಿದ್ಯುತ್ ಸಂಪರ್ಕವನ್ನು ಸರಿಪಡಿಸದ ಕಾರಣ ಬಂದರು ಪ್ರದೇಶದ ನಾಡಿಯಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಚಂತಲಾ ನಿವಾಸಿಗಳು ರಸ್ತೆ ಬಂದ್ ಮಾಡಿ ಪ್ರತಿಭಟಿಸುತ್ತಿದ್ದರು.