ಚೆನ್ನೈ ( ತಮಿಳುನಾಡು): ಕುಡಕ್ಕಲ್ ಕಟ್ಟುಮನ್ನಾರ್ಕೋವಿಲ್ ಬಳಿಯ ಕುರುಂಗುಡಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 9 ಜನ ಮೃತಪಟ್ಟಿದ್ದಾರೆ.
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 9 ಮಂದಿ ದುರ್ಮರಣ - explosion at crackers factory in Tamilnadu
ಪಟಾಕಿ ಕಾರ್ಖಾನೆಯ ಗೋಡೌನ್‌ನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡು ಐವರು ಮಹಿಳೆಯರು ಸೇರಿದಂತೆ 9 ಜನ ಮೃತಪಟ್ಟಿದ್ದಾರೆ.
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ
ಪಟಾಕಿ ಕಾರ್ಖಾನೆಯ ಮದ್ದುಗುಂಡುಗಳನ್ನು ಇರಿಸಲಾಗಿದ್ದ ಗೋಡೌನ್‌ನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ 9 ಜನ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಛಿದ್ರಛಿದ್ರವಾಗಿವೆ.
ಘಟನೆ ನಡೆದ ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯರನ್ನು ತಿರಿಚ್ಚಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.
Last Updated : Sep 4, 2020, 1:55 PM IST