ಚೆನ್ನೈ: ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪೊಲೀಸರು, ನೈರ್ಮಲ್ಯ ಕಾರ್ಮಿಕರು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರಿ ಆರೋಗ್ಯ ಅಧಿಕಾರಿಗಳು ಒಂದು ವೇಳೆ, ಕೊರೊನಾದಿಂದ ಮರಣ ಹೊಂದಿದ್ರೆ, ಕುಟುಂಬಳಿಗೆ 50 ಲಕ್ಷ ರೂ. ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ.
ಈ ಹಿಂದೆ 10 ಲಕ್ಷ ರೂ. ನೀಡುವುದಾಗಿ ಸಿಎಂ ಘೋಷಿಸಿದ್ದರು. ಈಗ 50 ಲಕ್ಷಕ್ಕೆ ಹೆಚ್ಚಿಸಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.