ಕರ್ನಾಟಕ

karnataka

ETV Bharat / bharat

ತಮಿಳುನಾಡಿನಲ್ಲಿ ಜ. 19ರಿಂದ 10, 12ನೇ ತರಗತಿಗಳು ಆರಂಭ! - ತಮಿಳುನಾಡಿನ ಇತ್ತೀಚಿನ ಸುದ್ದಿ

ವಿವಿಧ ರಾಜ್ಯಗಳಲ್ಲಿ ಶಾಲಾ-ಕಾಲೇಜು ಆರಂಭಗೊಳ್ಳುತ್ತಿದ್ದು, ಇದೀಗ ತಮಿಳುನಾಡಿನಲ್ಲೂ ಜನವರಿ 19ರಿಂದ 10 ಮತ್ತು 12ನೇ ತರಗತಿಗಳು ಪುನಾರಂಭಗೊಳ್ಳಲಿವೆ.

TN schools to reopen
TN schools to reopen

By

Published : Jan 12, 2021, 7:24 PM IST

ಚೆನ್ನೈ:ತಮಿಳುನಾಡಿನಲ್ಲಿ ಜನವರಿ 19ರಿಂದ 10 ಹಾಗೂ 12ನೇ ತರಗತಿಗಳು ಪುನಾರಂಭಗೊಳ್ಳಲಿದ್ದು, ಪ್ರತಿ ಕ್ಲಾಸ್ ರೂಂನಲ್ಲಿ 25 ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಿತಾಸಕ್ತಿ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮಾರ್ಚ್​​​-ಏಪ್ರಿಲ್​ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದಿದ್ದಾರೆ. ವಿದ್ಯಾರ್ಥಿಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಪ್ರತಿ ವಿದ್ಯಾರ್ಥಿಗೂ ವಿಟಮಿನ್​ ಮಾತ್ರೆ ನೀಡಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.

ಸಾರ್ವಜನಿಕ ಆರೋಗ್ಯ, ವೈದ್ಯಕೀಯ ತಜ್ಞರು, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಸಚಿವರ ಅಭಿಪ್ರಾಯ ಆಧರಿಸಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ: ವಕೀಲರಿಗೆ ಆರ್ಥಿಕ ಸಹಾಯ ಮಾಡುವಂತೆ ಬಾರ್​​ ಆ್ಯಂಡ್​ ಕೌನ್ಸಿಲ್​​ಗೆ ಸುಪ್ರೀಂ ಸೂಚನೆ

ಜನವರಿ 6ರಿಂದ 8ರವರೆಗೆ ವಿದ್ಯಾರ್ಥಿಗಳ ಪೋಷಕರ ಅಭಿಪ್ರಾಯ ಸಗ್ರಹಿಸಲಾಗಿದ್ದು, ಇದರಲ್ಲಿ ಅತಿ ಹೆಚ್ಚು ಜನರು ಶಾಲೆ ಪುನಾರಂಭ ಮಾಡುವಂತೆ ತಿಳಿಸಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ವಿಶೇಷ ಮನವಿ ಮಾಡಿರುವ ಮುಖ್ಯಮಂತ್ರಿಗಳು, ಕೋವಿಡ್​ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡುವಂತೆ ಹೇಳಿದ್ದಾರೆ.

ABOUT THE AUTHOR

...view details