ಶ್ರೀನಗರ (ಜಮ್ಮು ಕಾಶ್ಮೀರ):ಕಣಿವೆ ನಾಡಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಸೇರಿದಂತೆ ಜಮ್ಮು ಕಾಶ್ಮೀರದ ಹಲವು ರಾಜಕೀಯ ನಾಯಕರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಮ್ಮ ಪಕ್ಷದ ಮೂವರು ಯುವ ಕಾರ್ಯಕರ್ತರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಅವರು ಜಮ್ಮು ಕಾಶ್ಮೀರದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಂನಿಂದ ಭೀಕರ ಸುದ್ದಿಯೊಂದು ಬಂದಿದ್ದು, ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿರುವ ವಿಚಾರ ಖಂಡನೀಯವಾಗಿದೆ. ದೇವರು ಅವರು ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.