ಕರ್ನಾಟಕ

karnataka

ರಾಜಕೀಯ ನಾಯಕರು, ಭದ್ರತಾ ಮುಖ್ಯಸ್ಥರಿಂದ ಇಂದು ಗಡಿ ಪರಿಸ್ಥಿತಿ ಕುರಿತು ಚರ್ಚೆ ಸಾಧ್ಯತೆ

By

Published : Sep 18, 2020, 12:04 PM IST

ಪೂರ್ವ ಲಡಾಖ್​​ನಿಂದ ಅರುಣಾಚಲ ಪ್ರದೇಶದವರೆಗಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತ-ಚೀನಾ ಸೈನಿಕರ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ಸಭೆ ನಡೆಸುವ ಸಾಧ್ಯತೆ ಇದೆ.

LAC situation
ಭಾರತ-ಚೀನಾ

ನವದೆಹಲಿ: ಭಾರತ-ಚೀನಾ ನಡುವಿನ ಗಡಿ ಪರಿಸ್ಥಿತಿ ಸಂಬಂಧ ಚರ್ಚಿಸಲು ಉನ್ನತ ರಾಜಕೀಯ ನಾಯಕರು ಮತ್ತು ರಾಷ್ಟ್ರೀಯ ಭದ್ರತಾ ಮುಖ್ಯಸ್ಥರು ಇಂದು ಸಭೆ ನಡೆಸುವ ಸಾಧ್ಯತೆ ಇದೆ.

ಪೂರ್ವ ಲಡಾಖ್​​ನಿಂದ ಅರುಣಾಚಲ ಪ್ರದೇಶದವರೆಗಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತ-ಚೀನಾ ಸೈನಿಕರ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲು ಸಭೆ ಸೇರಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಹಿರಿಯ ಸಚಿವರು ಹಾಗೂ ಹಿರಿಯ ಸೇನಾ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಡೋಕ್ಲಾಮ್ ಮತ್ತು ಭೂತಾನ್ ಪ್ರದೇಶದಲ್ಲಿ ಚೀನಾದ ಸೇನಾ ಚಟುವಟಿಕೆಗಳು ಹಾಗೂ ಪರಿಸ್ಥಿತಿಯನ್ನು ಎದುರಿಸಲು ಭಾರತದ ಸಿದ್ಧತೆಗಳ ಬಗ್ಗೆ ಕೂಡ ಚರ್ಚಿಸುವ ಸಾಧ್ಯತೆಯಿದೆ.

ಈಗಾಗಲೇ 5 ಬಾರಿ ಚೀನಾ-ಭಾರತ ನಡುವೆ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದ್ದು, ಯಾವುದೇ ಮಹತ್ವದ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿವೆ. ಒಪ್ಪಂದಗಳನ್ನು ಚೀನಾ ಮುರಿಯುತ್ತಲೇ ಇದೆ. ಮುಂದಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯ ವಿಳಂಬದ ಕುರಿತೂ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.

ABOUT THE AUTHOR

...view details