ನವದೆಹಲಿ :ಇಂಗ್ಲೆಂಡ್ನಲ್ಲಿ ಹೊಸ ರೂಪ ತಾಳಿರುವ ಕೊರೊನಾ ವೈರಸ್ ಭಾರತದಲ್ಲಿ ಮತ್ತೆ 8 ಜನರಲ್ಲಿ ಪತ್ತೆಯಾಗಿದೆ. ದೇಶದಲ್ಲಿನ ರೂಪಾಂತರ ಕೋವಿಡ್ ಪ್ರಕರಣಗಳ ಸಂಖ್ಯೆ 90ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊರೊನಾಗಿಂತ ಶೇ.70ರಷ್ಟು ವೇಗವಾಗಿ ರೂಪಾಂತರಗೊಂಡಿರುವ ಕೊರೊನಾ ವೈರಸ್ ಹರಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (NIV), ಬೆಂಗಳೂರಿನ ನಿಮ್ಹಾನ್ಸ್, ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಅಂಡ್ ಇಂಟಿಗ್ರೇಟಿವ್ ಬಯಾಲಜಿ (IGIB) ಹಾಗೂ ಹೈದರಾಬಾದ್ನ ಪ್ರಯೋಗಾಲಯ ಸೇರಿದಂತೆ ದೇಶದಾದ್ಯಂತ ಒಟ್ಟು 10 ಲ್ಯಾಬ್ಗಳಲ್ಲಿ ಬ್ರಿಟನ್ ಸೋಂಕು ಪತ್ತೆ ಹಚ್ಚಲು ಪರೀಕ್ಷೆ ನಡೆಸಲಾಗುತ್ತಿದೆ.