ನವೆದೆಹಲಿ:ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 32,080 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 97,35,850 ಕ್ಕೆ ಏರಿದೆ.
ಕಳೆದ 24 ಗಂಟೆಗಳಲ್ಲಿ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚು
ಕಳೆದ 24 ಗಂಟೆಯಲ್ಲಿ 32,080 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. 36,635 ಜನ ಕೋವಿಡ್-19 ನಿಂದ ಗುಣಮುಖರಾಗಿದ್ದಾರೆ. 3,78,909 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 32,080 ಹೊಸ ಕೊರೊನಾ ಪ್ರಕರಣಗಳು ಪತ್ತೆ
402 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,41,360 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 36,635 ಜನ ಕೋವಿಡ್-19 ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 92,15,581 ಕ್ಕೆ ಏರಿದೆ. 3,78,909 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
ನಿನ್ನೆ 10,22,712 ಮಾದರಿಗಳನ್ನು ಪರೀಕ್ಷಿಸಿದ್ದು, ಡಿಸೆಂಬರ್ 8ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 14,98,36,767 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.
Last Updated : Dec 9, 2020, 10:20 AM IST