ಕರ್ನಾಟಕ

karnataka

ETV Bharat / bharat

ದೇಶದಲ್ಲಿ 80 ಲಕ್ಷ ಕೋವಿಡ್​ ಸೋಂಕಿತರು: 6 ಲಕ್ಷ ಕೇಸ್​ಗಳು ಮಾತ್ರ ಆ್ಯಕ್ಟಿವ್​

ದೇಶದಲ್ಲಿ ಶೇ.90ಕ್ಕೂ ಹೆಚ್ಚು ಜನರು (73,15,989) ಮಹಾಮಾರಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

Total number of corona cases and deaths in India
ದೇಶದಲ್ಲಿ 80 ಲಕ್ಷ ಕೋವಿಡ್​ ಸೋಂಕಿತರು

By

Published : Oct 29, 2020, 10:22 AM IST

ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 80 ಲಕ್ಷ ಗಡಿ ದಾಟಿದೆ. ಆದರೆ ಕಳೆದ ಆರು ವಾರಗಳಿಂದ ಹೊಸ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದ್ದು, ಸದ್ಯ 6 ಲಕ್ಷ ಕೇಸ್​ಗಳು ಮಾತ್ರ ಸಕ್ರಿಯವಾಗಿವೆ. ಮರಣ ಪ್ರಮಾಣ ಶೇ.1.5 ರಷ್ಟಿದ್ದು, ಶೇ.90ಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 49,881 ಸೋಂಕಿತರು ಪತ್ತೆಯಾಗಿದ್ದು, 517 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 80,40,203 ಹಾಗೂ ಮೃತರ ಸಂಖ್ಯೆ 1,20,527ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 73,15,989 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 6,03,687 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಅಕ್ಟೋಬರ್ 29ರ ವರೆಗೆ 10,65,63,440 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,75,760 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details