ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 24,712 ಕೋವಿಡ್ ಕೇಸ್ಗಳು ಪತ್ತೆಯಾಗಿದೆ. 312 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 1,01,23,778 ಹಾಗೂ ಮೃತರ ಸಂಖ್ಯೆ 1,46,756ಕ್ಕೆ ಏರಿಕೆಯಾಗಿದೆ.
'ಕೋವಾಕ್ಸಿನ್' ಉತ್ತಮ ಫಲಿತಾಂಶ:
ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆಯು ಕ್ಲಿನಿಕಲ್ ಪ್ರಯೋಗಗಳಲ್ಲಿ ಉತ್ತಮ ಫಲಿತಾಂಶಗಳನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಡೀ ದೇಶದ ಜನರೀಗ ಲಸಿಕೆಯ ನಿರೀಕ್ಷೆಯಲ್ಲಿದ್ದಾರೆ.
ಮುನ್ನೆಚ್ಚರಿಕೆ ವಹಿಸಿ:
ಸರಿಯಾಗಿ ಮಾಸ್ಕ್ ಧರಿಸುವುದು, ವ್ಯಕ್ತಿಯಿಂದ ವ್ಯಕ್ತಿಗೆ ಅಂತರ ಕಾಯ್ದುಕೊಳ್ಳುವುದು, ಆಗಾಗ ಕೈ ತೊಳೆಯುತ್ತಿರುವುದೇ ಕೊರೊನಾಗೆ ಸದ್ಯದ ಲಸಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆೆ ಎಚ್ಚರಿಕೆ ನೀಡುತ್ತಿದೆ.
ಓದಿ:ಬಣ್ಣ ಬದಲಿಸಿದ ಕೊರೊನಾ : ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಸಕ್ರಿಯ ಪ್ರಕರಣಗಳು, ಗುಣಮುಖರಾದವರೆಷ್ಟು?
ಒಟ್ಟು ಸೋಂಕಿತರ ಪೈಕಿ 96,93,173 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ 3 ಲಕ್ಷ ಗಡಿಯಿಂದ (2,83,849) ಕೆಳಗಿಳಿದಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶಾದ್ಯಂತ ಕೋವಿಡ್ ಮಾದರಿ ಪರೀಕ್ಷೆ:
ಡಿಸೆಂಬರ್ 23ರ ವರೆಗೆ 16,53,08,366 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,39,645 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
ಬ್ರಿಟನ್‌ನಿಂದ ಬರುವವರಿಗೆ ಮಾರ್ಗಸೂಚಿ:
ಇಂಗ್ಲೆಂಡ್ನಲ್ಲಿ ಹೊಸ ಪ್ರಭೇದದ ಕೋವಿಡ್ ವೈರಸ್ ಪತ್ತೆಯಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ಬ್ರಿಟನ್‌ನಿಂದ ಬರುವವರಿಗಾಗಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ.