ನವದೆಹಲಿ: ಜಾಗತಿಕ ಮಹಾಮಾರಿ ಕೊರೊನಾಗೆ ಭಾರತ ತಲ್ಲಣವಾಗಿದ್ದು, 12 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 2 ಲಕ್ಷ ಗಡಿ ಸನಿಹದಲ್ಲಿ ಗುಣಮುಖರ ಸಂಖ್ಯೆಯಿದೆ.
ಭಾರತದ ಮೇಲೆ ಕೊರೊನಾ ಕರಿಛಾಯೆ: 12 ಸಾವಿರ ಗಡಿ ದಾಟಿದ ಮೃತರ ಸಂಖ್ಯೆ - ಕೋವಿಡ್ 19
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,66,946ಕ್ಕೆ ಹಾಗೂ ಮೃತರ ಸಂಖ್ಯೆ 12,237ಕ್ಕೆ ಏರಿಕೆಯಾಗಿದೆ.
ಭಾರತದ ಮೇಲೆ ಕೊರೊನಾ ಕರಿಛಾಯೆ
ನಿನ್ನೆ ಒಂದೇ ಸುಮಾರು 12,881 ಕೇಸ್ಗಳು ಪತ್ತೆಯಾಗಿದ್ದು, 334 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,66,946ಕ್ಕೆ ಹಾಗೂ ಮೃತರ ಸಂಖ್ಯೆ 12,237ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 1,94,325 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 1,60,384 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.