ನವದೆಹಲಿ:ಭಾರತದಲ್ಲಿ ಕೇವಲ ಮೂರೇ ದಿನದಲ್ಲಿ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ 55 ಸಾವಿರ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 69,878 ಸೋಂಕಿತರು ಪತ್ತೆಯಾಗಿದ್ದು, 945 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 29,75,702ಕ್ಕೆ ಹಾಗೂ ಮೃತರ ಸಂಖ್ಯೆ 55,794ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 22,22,578 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 6,97,330 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಆಗಸ್ಟ್ 21ರ ವರೆಗೆ 3,44,91,073 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ ಈವರೆಗೆ ಅತಿ ಹೆಚ್ಚು ಟೆಸ್ಟ್ ಎಂಬಂತೆ 10,23,836 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.