ಕರ್ನಾಟಕ

karnataka

ETV Bharat / bharat

ಸಂಸತ್​ನಲ್ಲಿ ಪ್ರತಿಧ್ವನಿಸಿದ ಮಮತಾ ವರ್ಸಸ್ ಸಿಬಿಐ ವಿಚಾರ: ಕೋಲಾಹಲ ಕಲಾಪ ಮುಂದೂಡಿಕೆ - undefined

ನವದೆಹಲಿ: ಶಾರದಾ ಚಿಟ್ ಫಂಡ್ ವಿಚಾರಣೆ ಸಂಬಂಧ ಸಿಬಿಐ ಹಾಗೂ ಪಶ್ಚಿಮ ಬಂಗಾಳ ಸರ್ಕಾರದ ನಡುವೆ ನಡೆಯುತ್ತಿರುವ ಜಟಾಪಟಿ ಇಂದು ಸಂಸತ್ನಲ್ಲೂ ಪ್ರತಿಧ್ವನಿಸಿತು.

ಕೃಪೆ: eenaduindia.com

By

Published : Feb 4, 2019, 1:36 PM IST

ಈ ಬಗ್ಗೆ ಉತ್ತರ ನೀಡಿದ ಗೃಹ ಸಚಿವ ರಾಜನಾಥ್ ಸಿಂಗ್, ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ಅಲ್ಲಿನ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ಸಮನ್ಸ್ ಜಾರಿ ಮಾಡಿದ್ದು, ತಲೆದೋರಿರುವ ಬಿಕ್ಕಟ್ಟು ಶೀಘ್ರವೇ ಬಗೆಹರಿಸಲು ಸೂಚನೆ ನೀಡಿದ್ದಾರೆ ಎಂದು ಸದನದ ಗಮನಕ್ಕೆ ತಂದರು.

ಶಾರದಾ ಚಿಟ್ಫಂಡ್ ಕೇಸ್​ನಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಿಬಿಐ ಅಧಿಕಾರಿಗಳು ನಡೆದುಕಕೊಂಡಿದ್ದಾರೆ. ಪೊಲೀಸ್ ಕಮಿಷನರ್ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಇದ್ಯಾವುದಕ್ಕೂ ಸ್ಪಂದಿಸದಿದ್ದಾಗ ವಶಕ್ಕೆ ಪಡೆಯಲು ಸಿಬಿಐ ಮುಂದಾಗಿದೆ ಎಂದು ರಾಜನಾಥ್ ಸಿಂಗ್ ಸದನದ ಗಮನಕ್ಕೆ ತಂದರು.

ಈ ವೇಳೆ, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ನಡೆದಿದ್ದು, ಕೇಂದ್ರ ಸಿಬಿಐ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿವೆ. ಟಿಎಂಸಿ ನಾಯಕ ಸುಗತೋ ರಾಯ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂವಿಧಾನವನ್ನ ದುರುಪಯೋಗ ಮಾಡಿಕೊಂಡು ದುರಾಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಎನ್ಡಿಎ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ಮುಂದುವರೆದಿದ್ದರಿಂದ ಸದನವನ್ನ 2 ಗಂಟೆವರೆಗೆ ಸ್ಪೀಕರ್ ಮುಂದೂಡಿದರು.

For All Latest Updates

TAGGED:

ABOUT THE AUTHOR

...view details