ಕರ್ನಾಟಕ

karnataka

ETV Bharat / bharat

ಸುಪ್ರೀಂ ಅಂಗಳದಲ್ಲಿ ತ್ರಿವಳಿ ತಲಾಖ್​​: ಕೋರ್ಟ್​ನಿಂದ ಕೇಂದ್ರಕ್ಕೆ ನೋಟಿಸ್

ಕ್ಷುಲ್ಲಕ ಕಾರಣಗಳಿಗೆ ತ್ರಿವಳಿ ತಲಾಖ್ ನೀಡುತ್ತಿದ್ದ ಪ್ರಕರಣಗಳಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲ ಅಡೆತಡೆಗಳನ್ನು ಮೀರಿ ಮಸೂದೆಯನ್ನು ಅಂಗೀಕಾರ ಮಾಡಿ ಗೆದ್ದಿತ್ತು.

ಸುಪ್ರೀಂ ಕೋರ್ಟ್

By

Published : Aug 23, 2019, 12:10 PM IST

ನವದೆಹಲಿ:ಕೇಂದ್ರ ಸರ್ಕಾರ ಇತ್ತೀಚೆಗೆ ಸಂಸತ್ತಿನ ಎರಡೂ ಮನೆಗಳಲ್ಲೂ ಅನುಮೋದನೆ ಮಾಡಿದ್ದ ವಿವಾದಿತ ತ್ರಿವಳಿ ತಲಾಖ್​ ಮಸೂದೆ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ಒಪ್ಪಿಗೆ ಸೂಚಿಸಿದ್ದು, ಈ ಸಂಬಂಧ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ಸದ್ಯ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಮೂರು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಈ ಸಂಪ್ರದಾಯವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ ಮೂರು ವರ್ಷಗಳ ಜೈಲು ಶಿಕ್ಷೆ ನೀಡುವುದು ಸೂಕ್ತವಲ್ಲ. ಹೀಗಾಗಿ ಇದನ್ನು ಸುಪ್ರೀಂ​ ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರೊಬ್ಬರ ಪರ ವಕೀಲ ಹಾಗೂ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ABOUT THE AUTHOR

...view details