ತಿರುವನಂತಪುರಂ(ಕೇರಳ): ತಿರುವನಂತಪುರಂ ಕೋಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೊಬೈಲ್ ಫೋನ್ ಕದ್ದು ಬಂಧನಕ್ಕೊಳಗಾಗಿದ್ದ ಅನ್ಸಾರಿ (38), ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಸಾವು - custody death
ಮೊಬೈಲ್ ಫೋನ್ ಕದ್ದ ಆರೋಪದ ಮೇಲೆ ತಿರುವನಂತಪುರಂ ಕೋಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ವ್ಯಕ್ತಿ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
![ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಸಾವು Trivandrum fort station custody death](https://etvbharatimages.akamaized.net/etvbharat/prod-images/768-512-8447254-244-8447254-1597644062315.jpg)
ತಿರುವನಂತಪುರ ಕೋಟೆ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಸಾವು
ಮೊಬೈಲ್ ಫೋನ್ ಕದ್ದ ಆರೋಪದ ಮೇಲೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಸ್ಥಳೀಯರು ಆತನನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಅನ್ಸಾರಿ ಶೌಚಾಲಯದಲ್ಲಿ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ಭಾನುವಾರ ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದೆ.
ಕುಣಿಕೆ ತೆಗೆದು ಆತನನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ನಂತರ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಅಪರಾಧ ವಿಭಾಗ ಪ್ರಕರಣದ ತನಿಖೆ ನಡೆಸಲಿದೆ.