ಕರ್ನಾಟಕ

karnataka

ETV Bharat / bharat

ಪೊಲೀಸ್ ಕಸ್ಟಡಿಯಲ್ಲಿ ಸಾವು ಪ್ರಕರಣ: ತಮಿಳುನಾಡು ಸಿಎಂ ಸತ್ಯ ಮರೆಮಾಚಿದ್ದಾರೆ ಎಂದು ಸ್ಟಾಲಿನ್ ಆರೋಪ! - ತಮಿಳುನಾಡು ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ

ಪೊಲೀಸ್ ಠಾಣೆಯಲ್ಲಿ ನಡೆದ ಕ್ರೂರ ಹತ್ಯೆಗಳನ್ನು ಅನಾರೋಗ್ಯದ ಕಾರಣ ಸಾವು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮರೆಮಾಡಿದ್ದಾರೆ ಎಂದು ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.

stallin
stallin

By

Published : Jul 1, 2020, 4:18 PM IST

ಚೆನ್ನೈ (ತಮಿಳುನಾಡು): ತೂತುಕುಡಿಯ ಪೊಲೀಸ್ ಕಸ್ಟಡಿಯಲ್ಲಿ ಸಾವಿನ ಪ್ರಕರಣದ ಕುರಿತು ಮಾತನಾಡಿದ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ರಾಜ್ಯದ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಪೊಲೀಸ್ ಠಾಣೆಯಲ್ಲಿ ನಡೆದ ಕ್ರೂರ ಹತ್ಯೆಯನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದಾರೆ.

"ಪೊಲೀಸ್ ಠಾಣೆಯಲ್ಲಿ ನಡೆದ ಕ್ರೂರ ಹತ್ಯೆಗಳನ್ನು ಅನಾರೋಗ್ಯದ ಕಾರಣ ಸಾವು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮರೆಮಾಡಿದ್ದಾರೆ" ಎಂದು ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

"ಅವರು ಸಿಎಂ ಹುದ್ದೆಯಲ್ಲಿ ಉಳಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ" ಎಂದು ಡಿಎಂಕೆ ಅಧ್ಯಕ್ಷ ಹೇಳಿದ್ದಾರೆ.

ಪೊಲೀಸ್ ಕಸ್ಟಿಡಿಯಲ್ಲಿ ತಂದೆ ಮಗ ಮೃತಪಟ್ಟ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ತಮಿಳುನಾಡು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ.

ABOUT THE AUTHOR

...view details