ನವದೆಹಲಿ: ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಮತ್ತು ಸಾಮಾಜಿಕ - ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಗಟ್ಟುವ ಕುರಿತು ಇಂದು ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರತಿನಿಧಿಗಳು ಟ್ವಿಟರ್ ಮತ್ತು ಫೇಸ್‌ಬುಕ್ ಮಾಹಿತಿ ಮತ್ತು ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಹಾಜರಾಗಿದ್ದಾರೆ.
ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಮತ್ತು ಡಿಜಿಟಲ್ ಪ್ಲ್ಯಾಟ್ಫಾರ್ಮ್ನಲ್ಲಿ ಮಹಿಳಾ ಭದ್ರತೆಗೆ ವಿಶೇಷ ಒತ್ತು ನೀಡುವುದು ಸೇರಿದಂತೆ ಸಾಮಾಜಿಕ - ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಗಟ್ಟುವುದು ಎಂಬ ವಿಷಯದ ಕುರಿತು ಫೇಸ್‌ಬುಕ್ ಮತ್ತು ಟ್ವಿಟರ್‌ನ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಲು ಈ ಸಭೆ ನಡೆಯಿತು.
ಸಮಿತಿಯ ಸದಸ್ಯರು ವಿಶೇಷವಾಗಿ ಬಿಜೆಪಿ ಸಂಸದರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸುವ ವಿಷಯವನ್ನು ಇಂದು ನಡೆದ ಸಮಿತಿ ಸಭೆಯಲ್ಲಿ ದನಿ ಎತ್ತಿದರು. ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಐಟಿ ಸಂಸದೀಯ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿದ್ದಾರೆ. "ಇದು ಕೃತಿಸ್ವಾಮ್ಯದ ವಿಷಯವಾಗಿದೆ ಮತ್ತು ಶೀಘ್ರದಲ್ಲೇ ಖಾತೆಯನ್ನು ಮರು ಸ್ಥಾಪಿಸಲಾಗಿದೆ" ಎಂದು ಟ್ವಿಟರ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಸಭೆಯಲ್ಲಿ ಹಾಜರಿದ್ದ ಮೂಲಗಳು ತಿಳಿಸಿವೆ.