ಜಮ್ಮು:ಸರಿಸುಮಾರು 18 ಸಾವಿರ ಅಡಿ ಎತ್ತರದ ಸಿಯಾಚಿನ್ ಹಿಮಶ್ರೇಣಿಯಲ್ಲಿ ಪಹರೆ ನಡೆಸುತ್ತಿದ್ದ ವೇಳೆ ಹಿಮಪಾತ ಉಂಟಾಗಿರುವ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಕೆಲ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಇದೀಗ ಮತ್ತೆ ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಹಿಮಪಾತವಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಪಡೆ, ಕೆಲ ಯೋಧರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದೆ. ಘಟನೆಯಲ್ಲಿ ಇಬ್ಬರು ಯೋಧರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.