ಲಕ್ನೋ: 1992 ರಲ್ಲಿ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಆರೋಪದ ಹಿನ್ನೆಲೆ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಯೋಧ್ಯೆಯ ಇಬ್ಬರು ನಿವಾಸಿಗಳು ಇಂದು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ : 32 ಆರೋಪಿಗಳ ಖುಲಾಸೆ ಪ್ರಶ್ನಿಸಿ ಅರ್ಜಿ ಸಲ್ಲಿಕೆ - 1992 ರ ಬಾಬರಿ ಮಸೀದಿಯನ್ನು ನೆಲಸಮ
ವಿಶೇಷ ನ್ಯಾಯಾಲಯವು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವುದರ ವಿರುದ್ಧ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪರವಾಗಿ ಅಯೋಧ್ಯೆ ನಿವಾಸಿಗಳಾದ ಹಾಜಿ ಮಹಬೂಬ್ ಮತ್ತು ಹಾಜಿ ಸಯ್ಯದ್ ಅಖ್ಲಾಕ್ ಅಹ್ಮದ್ ಅವರು ಹೈಕೋರ್ಟ್‌ನ ಲಕ್ನೋ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ವಿಶೇಷ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಸಿಬಿಐ ಹೈಕೋರ್ಟ್‌ಗೆ ಹೋಗದ ಕಾರಣ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲು ಈ ಇಬ್ಬರೂ ನಿರ್ಧರಿಸಿದ್ದಾರೆ. ಬಾಬರಿ ಮಸೀದಿ ಧ್ವಂಸಗೊಂಡ ಇಪ್ಪತ್ತೆಂಟು ವರ್ಷಗಳ ನಂತರ, ವಿಶೇಷ ನ್ಯಾಯಾಲಯವು ಕಳೆದ ವರ್ಷ ಬಿಜೆಪಿಯ ಹಿರಿಯರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಶಿ ಮತ್ತು ಉಮಾ ಭಾರತಿ ಸೇರಿದಂತೆ ಎಲ್ಲ 32 ಜನರನ್ನು ಖುಲಾಸೆಗೊಳಿಸಿತ್ತು.