ನವದೆಹಲಿ: ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕೆಲವು ಗಂಟೆಗಳಿಂದ ಪತ್ತೆ ಹಚ್ಚುವ ಕಾರ್ಯ ಮುಂದುವರೆಯುತ್ತಿದೆ.
ಇತ್ತೀಚೆಗಷ್ಟೇ ಭಾರತೀಯ ಅಧಿಕಾರಿಗಳ ಮೇಲೆ ಪಾಕಿಸ್ತಾನ ಗೂಢಾಚಾರ ಏಜೆನ್ಸಿ ಐಎಸ್ಐ ಯಾವ ರೀತಿ ಕಿರುಕುಳ ನೀಡುತ್ತದೆ ಎಂದು ಕೆಲವು ಸುದ್ದಿ ಸಂಸ್ಥೆಗಳು ವರದಿ ಮಾಡಿದ್ದವು.
ದೆಹಲಿಯಲ್ಲಿ ಬೇಹುಗಾರಿಕೆ ನಡೆಸಲು ಯತ್ನಿಸಿದ್ದ ಇಬ್ಬರು ಪಾಕಿಸ್ತಾನದ ಅಧಿಕಾರಿಗಳನ್ನು ರೆಡ್ ಹ್ಯಾಂಡಾಗಿ ಹಿಡಿದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ದೆಹಲಿಯ ಸೌತ್ ಬ್ಲಾಕ್ ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳಿಗೆ ದೂರು ನೀಡಿದೆ. ಪಾಕ್ ವಿದೇಶಾಂಗ ಇಲಾಖೆ ಈ ನಾಪತ್ತೆ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ಈ ಘಟನೆಯಿಂದಾಗಿ ಪಾಕ್ ಹಾಗೂ ಭಾರತದ ಸಂಬಂಧಗಳು ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ.