ಹೈದರಾಬಾದ್: ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಬೀದರ್ ಜಿಲ್ಲೆಯ ವ್ಯಕ್ತಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ನಗರದ ಅಬಿಡ್ಸ್ ಬಳಿ ನಡೆದಿದೆ.
ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿ ಮಾಸ್ಟರ್ ಬೈಕ್ನಲ್ಲಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಅತೀ ವೇಗವಾಗಿ ಬಂದ ಸ್ಕೂಟಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದರು. ಆದ್ರೆ ಮಾರ್ಗ ಮಧ್ಯೆದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಇಬ್ಬರ ಪ್ರಾಣಪಕ್ಷಿ ಹಾರಿ ಹೋಗಿದೆ.