ಕರ್ನಾಟಕ

karnataka

ETV Bharat / bharat

ಇಬ್ಬರು ಎಲ್​ಇಟಿ ಉಗ್ರರನ್ನ ಹೊಡೆದುರುಳಿಸಿದ ಭದ್ರತಾ ಪಡೆ - undefined

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಕಾಳಗ ನಡೆದಿದ್ದು, ಇಬ್ಬರು ಎಲ್​ಇಟಿ ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದಾರೆ.

ಉಗ್ರರು

By

Published : May 12, 2019, 10:38 PM IST

ಶೊಪಿಯಾನ್​ (ಜಮ್ಮು-ಕಾಶ್ಮೀರ):ಕಣಿವೆ ರಾಜ್ಯದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಎಲ್​ಇಟಿ ಉಗ್ರರು ಹತರಾಗಿದ್ಧಾರೆ. ಇಲ್ಲಿನ ಹಿಂದ್​ ಸಿತಾ ಪೊರಾ ಪ್ರದೇಶದಲ್ಲಿ ಭದ್ರತಾ ಪಡೆಯು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

ಭಯೋತ್ಪಾದಕರನ್ನು ಕುಲಗಾಂನ ಜಾವಿದ್​ ಅಹ್ಮದ್​ ಹಾಗೂ ಆದಿಲ್​ ಬಶೀರ್​ ವಾನಿ ಎಂದು ಗುರುತಿಸಲಾಗಿದೆ. ಈ ಹಿಂದೆ ನಡೆದ ದುಷ್ಕೃತಗಳಲ್ಲಿ ಈ ಇಬ್ಬರು ಭಾಗಿಯಾಗಿದ್ದು, ಅವರ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ಧಾರೆ.

ಇನ್ನು ಗುಂಡಿನ ಚಕಮಕಿ ಬಳಿಕ ಹಿಂದ್​ ಸಿತಾ ಪೊರಾ ಪ್ರದೇಶದಲ್ಲಿ ಶಸ್ತ್ರಾಸ್ರ್ತಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

For All Latest Updates

TAGGED:

ABOUT THE AUTHOR

...view details