ಶ್ರೀನಗರ(ಜಮ್ಮು&ಕಾಶ್ಮೀರ): ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ಕೌಂಟರ್ ಮೂಲಕ ಇಬ್ಬರು ಉಗ್ರರ ಸದೆಬಡಿದ ಸೇನೆ - ದಕ್ಷಿಣ ಕಾಶ್ಮೀರ ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಎನ್ಕೌಂಟರ್ ಮೂಲಕ ಎರಡು ಉಗ್ರರನ್ನು ಸೆದೆಬಡಿದ ಸೇನೆ
ದಕ್ಷಿಣ ಕಾಶ್ಮೀರ ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಇಂದು ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಎನ್ಕೌಂಟರ್ ಮೂಲಕ ಹತ್ಯೆ ಮಾಡಲಾಗಿದೆ.
ಸಾಂಧರ್ಭಿಕ ಚಿತ್ರ
ದಕ್ಷಿಣ ಕಾಶ್ಮೀರ ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ನಂತರ ಉಗ್ರರು ಇರುವ ಖಚಿತ ಮಾಹಿತಿ ಪಡೆದುಕೊಂಡು ಉಗ್ರರನ್ನು ಸೆದೆಬಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರಿಗಾಗಿ ಶೋಧ ನಡೆಸುತ್ತಿರುವ ವೇಳೆ ಗುಂಡಿನ ಚಕಮಕಿ ನಡೆದಿದ್ದು, ನಂತರ ಎನ್ಕೌಂಟರ್ ಮೂಲಕ ಉಗ್ರರನ್ನು ಸದೆಬಡಿಯಲಾಗಿದೆ ಎಂದು ತಿಳಿದುಬಂದಿದೆ.
Last Updated : Mar 9, 2020, 3:02 PM IST