ಪ್ರಯಾಗ್ರಾಜ್ /ಉತ್ತರ ಪ್ರದೇಶ:ಇಲ್ಲಿನ ಫೂಲ್ಪುರದಲ್ಲಿರುವ ಇಫ್ಕೊ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಇಫ್ಕೋ ರಸಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆ : ಇಬ್ಬರು ನೌಕರರು ಸಾವು, 15 ಮಂದಿ ಅಸ್ವಸ್ಥ
08:29 December 23
ಉತ್ತರಪ್ರದೇಶದ ಪ್ರಯಾಗ್ರಾಜ್ನ ಫೂಲ್‌ಪುರದ ಇಫ್ಕೋ ರಸಗೊಬ್ಬರ ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿ, ಸುಮಾರು 15 ಜನ ತೀವ್ರ ಅಸ್ವಸ್ಥರಾಗಿದ್ದಾರೆ.
ಭಾರತೀಯ ರೈತ ರಸಗೊಬ್ಬರ ಸಹಕಾರಿ ಲಿಮಿಟೆಡ್(ಐಎಫ್ಎಫ್ ಸಿಒ)ದಲ್ಲಿ ಅನಿಲ ಸೋರಿಕೆಯಾಗಿ ಈ ದುರ್ಘಟನೆ ನಡೆದಿದ್ದು, ಒಂದು ಘಟಕದ ಕಾರ್ಯಾಚರಣೆಯನ್ನು ಸದ್ಯ ಸ್ಥಗಿತಗೊಳಿಸಲಾಗಿದೆ. ಸದ್ಯ ಅನಿಲ ಸೋರಿಕೆಯನ್ನು ನಿಲ್ಲಿಸಲಾಗಿದೆ ಎಂದು ಪ್ರಯಾಗ್ ರಾಜ್ ಜಿಲ್ಲಾಧಿಕಾರಿ ಭಾನು ಚಂದ್ರ ಗೋಸ್ವಾಮಿ ತಿಳಿಸಿದ್ದಾರೆ. ಅನಿಲ ಸೋರಿಕೆಯಿಂದಾಗಿ ಕಂಪನಿಯ ಇಬ್ಬರು ನೌಕರರು ಸಾವನ್ನಪ್ಪಿದ್ದು, ಐಎಫ್ಎಫ್ಸಿಒದ 15 ಮಂದಿ ನೌಕರರು ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮೃತರನ್ನು ಇಫ್ಕೋದ ಸಹಾಯಕ ವ್ಯವಸ್ಥಾಪಕ ಬಿ ಪಿ ಸಿಂಗ್ ಮತ್ತು ಉಪ ವ್ಯವಸ್ಥಾಪಕ ಅಭಿನಂದನ್ ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಗೂ ಘಟನೆಗೆ ಕಾರಣ ಕುರಿತು ಶೀಘ್ರ ತನಿಖೆ ಮಾಡುವಂತೆ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
ಇದನ್ನೂ ಓದಿ:ಪಾಕ್ನಿಂದ ಮುಂದುವರಿದ ಉದ್ಧಟತನ : ಪೂಂಚ್ನಲ್ಲಿ ಕದನ ವಿರಾಮ ಉಲ್ಲಂಘನೆ
TAGGED:
ಅನಿಲ ದುರಂತ