ಮಥುರಾ(ಉತ್ತರ ಪ್ರದೇಶ):ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮಥುರಾ ಜಿಲ್ಲೆಯ ಸುರಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಸ್ತಿ ವಿವಾದ: ದಂಪತಿ ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು! - ವೃದ್ಧ ದಂಪತಿಗಳ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ
ವೃದ್ಧ ದಂಪತಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
60 ವರ್ಷದ ಅಶೋಕ್ ಹಾಗೂ 50 ವರ್ಷದ ಗೀತಾ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇನ್ನು ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ನೆರೆಹೊರೆಯವರು ಬರುತ್ತಿದ್ದಂತೆ ಆರೋಪಿ ಕುಲ್ದೀಪ್ ಹಾಗೂ ಆತನ ಸಹಚರರು ಪರಾರಿಯಾಗಿದ್ದಾರೆ.
ಆಸ್ತಿ ವಿವಾದವಾಗಿ ಕಳೆದ ಕೆಲ ದಿನಗಳಿಂದ ಜಗಳ ನಡೆಯುತ್ತಿದ್ದು, ಅದು ನಿನ್ನೆ ತಾರಕ್ಕೇರಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸೆಪ್ಟೆಂಬರ್ 5ರಂದು ವ್ಯಕ್ತಿಯೊಬ್ಬ ತನ್ನ ಗೆಳೆಯ ಮೇಲೆ ಹಣಕಾಸಿನ ವಿಚಾರವಾಗಿ ಗುಂಡು ಹಾರಿಸಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು.