ಗಡ್‌ಚಿರೋಲಿ (ಮಹಾರಾಷ್ಟ್ರ): ನಕ್ಸಲರು ಹಾಗೂ ಪೊಲೀಸರ ನಡುವಿನ ಎನ್ಕೌಂಟರ್ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರ-ಛತ್ತೀಸ್ಗಢದ ಗಡಿ ಜಿಲ್ಲೆಯಾದ ಗಡ್‌ಚಿರೋಲಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ: ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮ - ನಕ್ಸಲರ ದಾಳಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ
ಪೊಲೀಸ್ ಸಿಬ್ಬಂದಿ ಹುತಾತ್ಮ
15:50 May 17
ಆ್ಯಕ್ಷನ್ ಫೋರ್ಸ್ನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಧನಾಜಿ ಹೋಮ್ನೆ ಹಾಗೂ ಸಿ -60 ಸ್ಕ್ವಾಡ್‌ನ ಪೇದೆ ಕಿಶೋರ್ ಆತ್ರಮ್ ಹುತಾತ್ಮರಾಗಿದ್ದಾರೆ. ಗಾಯಗೊಂಡವರ ರಕ್ಷಣೆಗೆ ಹೆಲಿಕಾಪ್ಟರ್ ಅನ್ನು ಕಳುಹಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಹೆಚ್ಚುವರಿಯಾಗಿ ಸಿ -60 ಸ್ಕ್ವಾಡ್‌ನ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ.
Last Updated : May 17, 2020, 8:32 PM IST