ಬಾರಾಮುಲ್ಲಾ (ಜಮ್ಮು ಮತ್ತು ಕಾಶ್ಮೀರ):ಬಾರಾಮುಲ್ಲಾದ ವಾನಿಗಂ ಪಯೀನ್ ಕ್ರೆರಿ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಅಪರಿಚಿತ ಭಯೋತ್ಪಾದಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಕಾಳಗ: ಇಬ್ಬರು ಉಗ್ರರು ಹತ - ಭದ್ರತಾ ಪಡೆಗಳಿಂದ ಇಬ್ಬರು ಉಗ್ರರು ಹತ
ಬಾರಾಮುಲ್ಲಾ ಪ್ರದೇಶದಲ್ಲಿ ಇಂದು ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಟ್ಟು ಮೂವರು ಅಪರಿಚಿತ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಈವರೆಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಸದ್ಯ ಕಾರ್ಯಾಚರಣೆ ನಡೆಯುತ್ತಿದೆ. ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಅಪರಿಚಿತ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಂದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ, ಎಂದು ಜಮ್ಮು- ಕಾಶ್ಮೀರ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇಂದು ನಡೆದ ಪಾಕ್ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಒಟ್ಟು ಮೂರು ಭಯೋತ್ಪಾದಕರು ಹತರಾಗಿದ್ದಾರೆ. ಇನ್ನೊಂದೆಡೆ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.