ಶೋಪಿಯಾನ್ (ಜಮ್ಮು ಮತ್ತು ಕಾಶ್ಮೀರ): ಶೋಪಿಯಾನ್‌ನ ಮಲ್ಹೂರಾ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಯೋಧರು ಹೊಡೆದುರುಳಿಸಿದ್ದಾರೆ.
ಶೋಪಿಯಾನ್‌ನಲ್ಲಿ ಯೋಧರ ಭರ್ಜರಿ ಬೇಟೆ... ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಸಂಹಾರ - ಕಾಶ್ಮೀರ ವಲಯ ಪೊಲೀಸರು
ಶೋಪಿಯಾನ್‌ನ ಮಲ್ಹೂರಾ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಯೋಧರು ಬೇಟೆಯಾಡಿದ್ದಾರೆ.
ಶೋಪಿಯಾನ್‌ನ ಮಲ್ಹೂರಾ ಪ್ರದೇಶದಲ್ಲಿ ನಾಲ್ವರು ಭಯೋತ್ಪಾದಕರ ಎನ್‌ಕೌಂಟರ್
"ಶೋಪಿಯಾನ್‌ನ ಮಲ್ಹೂರಾದಲ್ಲಿ ಎನ್‌ಕೌಂಟರ್ ಮುಂದುವರಿದಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತರಾಗಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಮೊನ್ನೆ ಮಾಹಿತಿ ನೀಡಿದ್ದರು.
ಉಗ್ರರ ಸಂಹಾರಕ್ಕೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಟ್ವಿಟ್ಟರ್ ನಲ್ಲಿ ತಿಳಿಸಿದೆ.