ಗುಂಟೂರು(ಆಂಧ್ರಪ್ರದೇಶ): ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಬೆಟ್ಟಿಂಗ್ ಆಡಿ ಅಪಾರ ಪ್ರಮಾಣದಲ್ಲಿ ಹಣ ಕಳೆದುಕೊಂಡಿರುವ ಕಾರಣ ಇಬ್ಬರು ಯುವಕರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಗುಂಟೂರು ಜಿಲ್ಲೆಯ ತಾಲೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.
ಐಪಿಎಲ್ ಬೆಟ್ಟಿಂಗ್ನಲ್ಲಿ ಭಾರಿ ಸೋಲು:ಯುವಕರಿಬ್ಬರಿಂದ ಆತ್ಮಹತ್ಯೆ ಯತ್ನ, ಓರ್ವ ಸಾವು! - ಆಂಧ್ರದಲ್ಲಿ ಯುವಕರಿಬ್ಬರಿಂದ ಆತ್ಮಹತ್ಯೆ ಯತ್ನ
ಐಪಿಎಲ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡು ಅದರಿಂದ ಹೊರ ಬರಲು ಸಾಧ್ಯವಾಗದೇ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ಸುರೇಶ್ ಹಾಗೂ ಕುಮಾರೈಯಾ ಎಂಬ ಇಬ್ಬರು ಯುವಕರು ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡಿದ್ದಾರೆ. ಇದರಿಂದ ಹೊರ ಬರುವ ಹಾದಿ ಕಾಣದೇ ವಿಷ ಸೇವನೆ ಮಾಡಿದ್ದಾರೆ. ತದನಂತರ ರೈಲ್ವೆ ಸ್ಟೇಷನ್ಗೆ ತೆರಳಿರುವ ಅವರು ಅಲ್ಲಿ ಆತ್ಮಹತ್ಯೆ ಯತ್ನ ನಡೆಸಿದ್ದಾರೆ.
ಇನ್ನು ತಾವು ವಿಷ ಸೇವನೆ ಮಾಡಿರುವ ವಿಡಿಯೋ ಚಿತ್ರೀಕರಣ ಮಾಡಿರುವ ಇಬ್ಬರು ತಮ್ಮ ಸಂಬಂಧಿಕರಿಗೆ ರವಾನೆ ಮಾಡಿದ್ದಾರೆ. ಈ ವೇಳೆ ತಾವು ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿರುವಾಗಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿರುವ ಸಂಬಂಧಿಕರು ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಇದರಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.