ಮುಂಬೈ(ಮಹಾರಾಷ್ಟ್ರ): ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರವಾಗಿ ಇರುವ ಮೂಲಕ ಇಬ್ಬಗೆಯ ಧೋರಣೆ ತೋರುತ್ತಿದೆ ಎಂದು ಮಹಾರಾಷ್ಟ್ರ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ಮತ್ತೆ ಬೆಳಗಾವಿ ಕ್ಯಾತೆ: ಕೇಂದ್ರದ ವಿರುದ್ಧವೇ ಸಿಡಿಮಿಡಿ... ಅಷ್ಟಕ್ಕೂ ಈ ಕೋಪಕ್ಕೆ ಕಾರಣ ಏನು ಗೊತ್ತೇ?
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರವಾಗಿ ಇರುವ ಮೂಲಕ ಇಬ್ಬಾಗಿಯ ಧೋರಣೆ ತೋರುತ್ತಿದೆ ಎಂದು ಮಹಾರಾಷ್ಟ್ರ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಉದವ್ ಠಾಕ್ರೆ ಹೇಳಿದ್ದಾರೆ.
ನಾನು ಏಕೀಕೃತ ಮಹಾರಾಷ್ಟ್ರದ ಕಡೆಗೆ ಬದ್ಧನಾಗಿರುತ್ತೇನೆ. ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳ ಪಾಲಕರಾಗಿದ್ದು, ಎಲ್ಲ ರಾಜ್ಯಗಳ ಬಗ್ಗೆ ಪಕ್ಷಪಾತವಿಲ್ಲದೇ, ನಿಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಆದರೆ, ಕೇಂದ್ರ ಸರ್ಕಾರವು ಕಳೆದ ಐದು ವರ್ಷಗಳಿಂದ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರವಾಗಿ ನಿಂತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಠಾಕ್ರೆ ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಗೃಹ ಸಚಿವಾಲಯಕ್ಕೆ ಕಾಶ್ಮೀರ ಸಮಸ್ಯೆ ಬಗೆಹರಿಸಲು ಮತ್ತು 370 ನೇ ವಿಧಿಯನ್ನು ರದ್ದುಗೊಳಿಸಲು ಸಾಧ್ಯವಾಗುವುದಾದರೆ, ಬೆಳಗಾವಿ ಗಡಿ ಸಮಸ್ಯೆಯನ್ನು ಸಹ ಅಮಿತ್ ಷಾ ಅವರು ಬಗೆಹರಿಸಬಹುದು. ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ವಿವಾದವೂ ಸಹ ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತದೆ, ಹಲವು ವರ್ಷಗಳಿಂದ ಬಾಕಿ ಇರುವ ಈ ವಿವಾದವನ್ನು ಸಾಧ್ಯವಾದಷ್ಟು ಬೇಗನೆ ಪರಿಹರಿಸಲು ಗಮನ ಹರಿಸಬೇಕೆಂದು ಠಾಕ್ರೆ ಆಗ್ರಹಿಸಿದ್ದಾರೆ.