ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಸೂತ್ರಧಾರ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಶಿವಾಜಿ ಪಾರ್ಕ್ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಪ್ರತಿಜ್ಞಾವಿಧಿ ಬೋಧಿಸಿದರು.
ಎನ್ಸಿಪಿ+ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ 19ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಶಿವಸೇನೆಗೆ ಒಲಿದು ಬಂದಿರುವ ಮೊದಲ ಮುಖ್ಯಮಂತ್ರಿ ಪದವಿ ಇದಾಗಿದೆ. ಚುನಾವಣೆ ವೇಳೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ತದನಂತರ ಸೀಟು ಹಂಚಿಕೆ ವಿಚಾರದಲ್ಲಿ ಎರಡು ಪಕ್ಷಗಳ ನಡುವೆ ವೈಮನಸ್ಸು ಉಂಟಾಗಿದ್ದರಿಂದ ಬಿಜೆಪಿ ತೊರೆದು ಎನ್ಸಿಪಿ+ಕಾಂಗ್ರೆಸ್ ಜತೆ ಶಿವಸೇನೆ ಮೈತ್ರಿ ಮಾಡಿಕೊಂಡಿದೆ.