ಮುಂಬೈ: ತೀವ್ರ ಸಂಚಲನ ಮೂಡಿಸಿದ್ದ ಮಹಾರಾಷ್ಟ್ರ ರಾಜಕೀಯಕ್ಕೀಗ ಹೊಸ ತಿರುವು ಸಿಕ್ಕಿದೆ. ಪ್ರಮಾಣ ವಚನ ಸ್ವೀಕರಿಸಿದ ನಾಲ್ಕೇ ದಿನಕ್ಕೆ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹಾಗೂ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ.
5 ವರ್ಷಗಳ ಕಾಲ ಉದ್ಧವ್ ಠಾಕ್ರೆ 'ಮಹಾ' ಮುಖ್ಯಮಂತ್ರಿ.. ಸಂಜಯ್ ರಾವತ್ - ಸಂಜಯ್ ರಾವತ್ ಲೇಟೆಸ್ಟ್ ಸುದ್ದಿ
ದೇವೇಂದ್ರ ಫಡ್ನವೀಸ್ ಹಾಗೂ ಅಜಿತ್ ಪವಾರ್ ಇಬ್ಬರೂ ಸಿಎಂ-ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಉದ್ಧವ್ ಠಾಕ್ರೆ 5 ವರ್ಷಗಳ ಕಾಲ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಸಂಜಯ್ ರಾವತ್
ಹೀಗಾಗಿ ಮತ್ತೆ ಎನ್ಸಿಪಿ-ಕಾಂಗ್ರೆಸ್-ಶಿವಸೇನೆ ಪಕ್ಷಗಳು ಸೇರಿ ಸರ್ಕಾರ ರಚನೆಯ ಕಸರತ್ತು ಮುಂದುವರೆಸಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಅಜಿತ್ ದಾದಾ ರಾಜೀನಾಮೆ ನೀಡಿದ್ದಾರೆ. ಅವರೀಗ ನಮ್ಮೊಂದಿಗೆ ಇದ್ದಾರೆ. ಉದ್ಧವ್ ಠಾಕ್ರೆ 5 ವರ್ಷಗಳ ಕಾಲ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.