ಮುಂಬೈ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಕಾಂಗ್ರೆಸ್ ಸಿಎಂಗಳೊಂದಿಗೆ ಸೋನಿಯಾ ವಿಡಿಯೋ ಕಾನ್ಫರೆನ್ಸ್: ಸಂವಾದದಲ್ಲಿ ಭಾಗವಹಿಸಲಿದ್ದಾರೆ ಉದ್ಧವ್ ಠಾಕ್ರೆ - ಸೋನಿಯಾ ಗಾಂಧಿ ವಿಡಿಯೋ ಕಾನ್ಫರೆನ್ಸ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ನೀಟ್ ಮತ್ತು ಜೆಇಇ ಪರೀಕ್ಷೆಗಳು ಮತ್ತು ಕೇಂದ್ರದೊಂದಿಗೆ ರಾಜ್ಯ ಸರ್ಕಾರಗಳ ಜಿಎಸ್ಟಿ ಬಾಕಿ ಕುರಿತು ಮುಖ್ಯಮಂತ್ರಿಗಳಿಗೆ ಸೋನಿಯಾ ಗಾಂಧಿ ಮಾರ್ಗದರ್ಶನ ನೀಡಲಿದ್ದಾರೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕೊರೊನಾ ವೈರಸ್‌ನ ಸ್ಥಿತಿಯನ್ನು ಮೇ ತಿಂಗಳಿಗೂ ಮೊದಲು ಸೋನಿಯಾ ಗಾಂಧಿ ಪರಿಶೀಲಿಸಿದ್ದರು. ಈ ಹಿಂದೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (ಪಂಜಾಬ್), ಅಶೋಕ್ ಗೆಹ್ಲೋಟ್ (ರಾಜಸ್ಥಾನ), ಭೂಪೇಶ್ ಸಿಂಗ್ ಬಘೇಲ್(ಛತ್ತೀಸ್ಗಢ), ಮಮತಾ ಬ್ಯಾನರ್ಜಿ (ಪಶ್ಚಿಮ ಬಂಗಾಳ), ಉದ್ಧವ್ ಠಾಕ್ರೆ (ಮಹಾರಾಷ್ಟ್ರ) ಭಾಗವಹಿಸಲಿದ್ದಾರೆ.