ಕರ್ನಾಟಕ

karnataka

ETV Bharat / bharat

ಉದ್ಧವ್ ಠಾಕ್ರೆ ಸರ್ಕಾರಕ್ಕೆ ನಾಳೆ ಬಹುಮತ ಸಾಬೀತಿನ ಸವಾಲು..!

ಲಭ್ಯ ಮಾಹಿತಿ ಪ್ರಕಾರ ಗುರುವಾರ ಅಸ್ತಿತ್ವಕ್ಕೆ ಬಂದಿರುವ ಉದ್ಧವ್ ಠಾಕ್ರೆ ಸರ್ಕಾರ ಶನಿವಾರ ತನ್ನ ಬಹುಮತ ಸಾಬೀತುಪಡಿಸಲಿದೆ.

Uddhav Thackery
ಉದ್ಧವ್ ಠಾಕ್ರೆ

By

Published : Nov 29, 2019, 3:14 PM IST

ಮುಂಬೈ: ಗುರುವಾರ ಸಂಜೆ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಉದ್ಧವ್ ಠಾಕ್ರೆ ಸರ್ಕಾರ ಶನಿವಾರ ತನ್ನ ಬಹುಮತ ಸಾಬೀತುಪಡಿಸಲಿದೆ ಎನ್ನುವ ಮಾಹಿತಿ ಸದ್ಯ ಲಭ್ಯವಾಗಿದೆ.

ಒಂದು ತಿಂಗಳಲ್ಲಿ ಮಹಾರಾಷ್ಟ್ರ ಜನತೆ ಗುರುವಾರ ಎರಡನೇ ಸರ್ಕಾರವನ್ನು ನೋಡಿದ್ದು, ಎನ್​ಸಿಪಿ - ಶಿವಸೇನೆ-ಕಾಂಗ್ರೆಸ್ ಮಹಾಮೈತ್ರಿಕೂಟದಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಠಾಕ್ರೆ ಮೊದಲ ಸಂಪುಟದಲ್ಲೇ ಶಿವಾಜಿ ರಾಜಧಾನಿ ಅಭಿವೃದ್ಧಿಗೆ 20 ಕೋಟಿ ರೂ. ಮಂಜೂರು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105 ಸೀಟು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಶಿವಸೇನೆ 56, ಎನ್​ಸಿಪಿ 54 ಹಾಗೂ ಕಾಂಗ್ರೆಸ್ 44 ಕ್ಷೇತ್ರ ತನ್ನದಾಗಿಸಿಕೊಂಡಿತ್ತು. ಬಿಜೆಪಿ ಮೈತ್ರಿ ಕಡಿದುಕೊಂಡು ಶಿವಸೇನೆ ಸದ್ಯ ಎನ್​ಸಿಪಿ ಹಾಗೂ ಕಾಂಗ್ರೆಸ್ ಬೆಂಬಲದಿಂದ ಸರ್ಕಾರ ರಚಿಸಿದೆ.

ABOUT THE AUTHOR

...view details