ನವದೆಹಲಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಿಗೆ ಕೆಲವು ಸಲಹೆ-ಸೂಚನೆಗಳನ್ನು ನೀಡಿ ಅಧಿಸೂಚನೆ ಹೊರಡಿಸಿದೆ.
ಕೊರೊನಾ ತಡೆಗೆ ವಿಶ್ವವಿದ್ಯಾಲಯಗಳಿಗೆ ಯುಜಿಸಿ ಸಲಹೆ - ವಿಶ್ವವಿದ್ಯಾಲಯ ಧನಸಹಾಯ ಆಯೋಗ
ಕ್ಯಾಂಪಸ್ಗಳಲ್ಲಿ ದೊಡ್ಡ ಮಟ್ಟದಲ್ಲಿ ಗುಂಪು ಸೇರಬಾರದು ಎನ್ನುವುದು ಸೇರಿದಂತೆ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೆಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಿಗೆ ಯುಜಿಸಿಯು ಸಲಹೆ-ಸೂಚನೆಗಳನ್ನು ನೀಡಿದೆ.
ವಿದ್ಯಾರ್ಥಿಗಳು, ಶಿಕ್ಷಕರು ಯಾರಾದರೂ ಕೊರೊನಾ ಪೀಡಿತ ದೇಶಗಳಿಗೆ ಭೇಟಿ ನೀಡಿ ಬಂದಿದ್ದರೆ, ಅಥವಾ ಕಳೆದ 28 ದಿನಗಳಲ್ಲಿ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದರೆ ಅಂತವರು 14 ದಿನಗಳ ಕಾಲ ಮನೆಯಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುವುದೊಳಿತು ಎಂದು ತಿಳಿಸಿದೆ. ಯಾವುದಾದರೂ ವಿದ್ಯಾರ್ಥಿಗಳು ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳಿಂದ ಬಳಲುತ್ತಿರುವುದನ್ನು ಗಮನಿಸಿದಲ್ಲಿ ತಕ್ಷಣವೇ ಅಂತವರನ್ನು ಪರೀಕ್ಷೆಗೆ ಒಳಪಡಿಸುವಂತೆ ಶಾಲಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.
ಅಲ್ಲದೇ ಕ್ಯಾಂಪಸ್ಗಳಲ್ಲಿ ದೊಡ್ಡ ಮಟ್ಟದಲ್ಲಿ ಗುಂಪು ಸೇರದಂತೆ ನಿರ್ದೇಶಿಸಲಾಗಿದೆ. ಹಾಗೂ ಕಾಲೇಜುಗಳ ವಿಶ್ರಾಂತಿ ಕೊಠಡಿ, ಶೌಚಾಲಯಗಳಲ್ಲಿ ಆಲ್ಕೋಹಾಲ್ ಆಧರಿತ ಹ್ಯಾಂಡ್ ವಾಶ್ಗಳನ್ನು ಇಡುವಂತೆ ಸೂಚನೆ ಕೂಡ ನೀಡಲಾಗಿದೆ.